ಮೇ 3ರಂದು: ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

0
24

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ೨೦೨೫ರ ಮೇ ೩ರಂದು ಸಂಜೆ ಗಂಟೆ ೬.೪೮ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೩ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಚೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಭಾನುವಾರ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಎ.ವಿ.ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ ೨೫ರೊಳಗೆ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ: ೦೮೨೫೬೨೬೬೪೪, ೯೬೬೩೪೬೪೬೪೮, ೮೧೪೭೨೬೩೪೨೨ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Previous articleವಿಶ್ವವಿದ್ಯಾಲಯ ಮುಚ್ಚುವುದರಿಂದ ಎಸ್ಸಿ, ಎಸ್ಟಿ, ಒಬಿಸಿ, ಮಹಿಳೆಯರಿಗೆ ಅನ್ಯಾಯ
Next articleಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ತೀರ್ಮಾನವೇ ಅಂತಿಮ