ಮೊದಲ ಬಾರಿಗೆ ಉದ್ಯೋಗ ಸೇರಿದವರಿಗೆ ಬಂಪರ್ ಉಡುಗೊರೆ

0
19

ನವದೆಹಲಿ: ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ ಕೇಂದ್ರ ಸರ್ಕಾರವು ಒಂದು ತಿಂಗಳ ಸಂಬಳವಾಗಿ 15 ಸಾವಿರ ರೂ. ನೀಡುವ ಯೋಜನೆಯನ್ನು ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ.
ದಿವಂಗತ ಮೊರಾಜಿ ದೇಸಾಯಿ ಅವರ ಸತತ ಆರು ಬಜೆಟ್‌ಗಳ ದಾಖಲೆಯ ನಂತರ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆಯ ಆರಂಭದಲ್ಲೇ ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ ಒಂದು ತಿಂಗಳ ವೇತನವನ್ನು ನೀಡುವ ಯೋಜನೆಯನ್ನು ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಅಂದರೆ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ ಕೇಂದ್ರ ಸರ್ಕಾರವು ಒಂದು ತಿಂಗಳ ಸಂಬಳವಾಗಿ 15 ಸಾವಿರ ರೂ. ನೀಡುತ್ತದೆ. ಇದರಿಂದ 2.1 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಇಪಿಎಫ್‌ಒಗೆ ನೋಂದಣಿ ಮಾಡಿಕೊಳ್ಳುತ್ತಲೇ ಒಂದು ತಿಂಗಳ ಸಂಬಳವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಉದ್ಯೋಗಿಗಳಿಗೆ ಅನುಕೂಲವಾಗಲಿ ಎಂದು ಮೊದಲ ಬಾರಿ ಕೆಲಸಕ್ಕೆ ಸೇರಿದವರಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ.

Previous articleಅಫೀಮ್ ಮಾರಾಟ ಐವರ ಬಂಧನ
Next articleಬಜೆಟ್‌ನಲ್ಲಿ 9 ಕ್ಷೇತ್ರಗಳಿಗೆ ಆದ್ಯತೆ: 4 ಮುಖ್ಯ ಆಧಾರ ಸ್ತಂಭಗಳು