ಮೋದಿ ಹೆಸರು, ಭಾವಚಿತ್ರ ಬಳಸದಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

0
11

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಗೂ ಹೆಸರನ್ನು ಬಿಜೆಪಿ ಅಧಿಕೃತ ಅಭ್ಯರ್ಥಿಗಳಲ್ಲದ ಹೊರತು ಬೇರೆ ಅಭ್ಯರ್ಥಿಗಳು ಬಳಸಲು ಅವಕಾಶ ನೀಡಬಾರದು ಎಂದು ರಾಜ್ಯ ಬಿಜೆಪಿ ಘಟಕ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಸೇರಿದಂತೆ ಇತರರು ಚುನಾವಣಾ ಆಯೋಗಕ್ಕೆ ನೀಡಿರುವ ಲಿಖಿತ ದೂರಿನಲ್ಲಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಜೊತೆಗೆ ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷರಾಗಿದ್ದಾರೆ. ಪಕ್ಷವು ನರೇಂದ್ರ ಮೋದಿ ಅವರ ಮುಂದಾಳತ್ವದಲ್ಲಿ ಪ್ರಸಕ್ತ (೨೦೨೪) ಲೋಕಸಭಾ ಚುನಾವಣೆ ಎದುರಿಸುತ್ತಿದೆ ಎಂದು ತಿಳಿಸಿದ್ದಾರೆ.

Previous articleರಮ್ಯಾ-ರಾಹುಲ್ ಪ್ರಚಾರಕ್ಕೆ ರೆಡಿ
Next articleಸಾರಿಗೆ ನೌಕರರಿಗೆ ರಜೆ ಮತದಾರರಿಗೆ ತೊಂದರೆ