ಯತ್ನಾಳ ಸವಾಲಿಗೆ ರಾಜೀನಾಮೆ ಕೊಟ್ಟ ಸಚಿವ

0
49

ಬೆಂಗಳೂರು: ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ನಿಟ್ಟಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪತ್ರ ರವಾನಿಸಿದ್ದಾರೆ.
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಹಾಕಿದ್ದ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಖುದ್ದಾಗಿ ಭೇಟಿಯಾಗಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರಪ್ಪನಿಗೆ ಹುಟ್ಟಿದ್ರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ ಎಂದು ಬಸನಗೌಡ ಪಾಟೀಲ್‌ ಯತ್ನಾಳ ಸವಾಲು ಹಾಕಿದ್ದರು. ಅವರ ಸವಾಲನ್ನು ಸ್ವೀಕಾರ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆಗೆ ಸಿದ್ಧ ಎಂದು ಶಿವಾನಂದ ಪಾಟೀಲ್ ಹೇಳಿದ್ದಾರೆ.

Previous articleSSLC Result: 22 ವಿದ್ಯಾರ್ಥಿಗಳು ಪ್ರಥಮ
Next articleಚಾಮರಾಜನಗರ: ಡಿಸಿ‌ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ