ಬೆಂಗಳೂರು: ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ರೈಲ್ವೇ ಇಲಾಖೆ ಅನುಮತಿ ನೀಡಿದೆ.
ತುಮಕೂರು ಜನರ ಬಹುದಿನದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದ್ದು, ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ಅನುಮತಿ ನೀಡಿದೆ. ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ಕೊಟ್ಟಿದೆ. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ಟ್ರೈನ್ ಓಡಿಸುವಂತೆ ತುಮಕೂರು ಜನರು ಬಹುವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ತುಮಕೂರು ಸಂಸದ ವಿ.ಸೋಮಣ್ಣ ರೈಲ್ವೆ ಇಲಾಖೆ (ರಾಜ್ಯ ಸಚಿವ) ಪದವಿ ವಹಿಸಿಕೊಳ್ಳುತ್ತಿದ್ದಂತೆ ಇದಕ್ಕೆ ಅನುಮೋದನೆ ಸಿಕ್ಕಿದೆ. ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ಟೈನ್ ಓಡಾಟಕ್ಕೆ ರೈಲ್ವೇ ಇಲಾಖೆ ಅನುಮತಿ ನೀಡಿದ್ದು. ಭಾನುವಾರ ಹೊರತುಪಡಿಸಿ ವಾರದ 6 ದಿನಗಳಲ್ಲಿ ಮೆಮು ಟ್ರೇನ್ ಓಡಾಟ ನಡೆಸಲಿದೆ. ಕ್ಯಾತಸಂದ್ರ, ಹೀರೇಹಳ್ಳಿ, ದಾಬಸ್ ಪೇಟೆ , ನಿಡವಂದ , ಮುದ್ದಲಿಂಗನಹಳ್ಳಿ, ದೊಡ್ಡಬೆಲೆ, ಭೈರನಾಯಕನಹಳ್ಳಿ, ಗೊಲ್ಲಹಳ್ಳಿ, ಸೋಲದೇವನಹಳ್ಳಿ ಹಾಗೂ ಚಿಕ್ಕಬಾಣಾವರದಲ್ಲಿ ನಿಲುಗಡೆ ಇರಲಿದೆ.
ಯಶವಂತಪುರ – ಹೊಸೂರು ಮಾರ್ಗ: ಯಶವಂತಪುರ – ಹೊಸೂರು ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ರೈಲ್ವೇ ಇಲಾಖೆ ಅನುಮತಿ ನೀಡಿದೆ, ಯಶವಂತಪುರ ಮೆಮು ರೈಲು ಹೆಬ್ಬಾಳ, ಬಾಣಸವಾಡಿ, ಬೆಳ್ಳಂದೂರು ರಸ್ತೆ, ಕಾರ್ಮೆಲರಾಂ, ಹೀಲಲಿ, ಆನೆಕಲ್ ರಸ್ತೆಯಲ್ಲಿ ನಿಲ್ಲುತ್ತದೆ.