ಯಾರಿಗೂ ನೋಟಿಸ್ ನೀಡಿಲ್ಲ

0
25

ಬೆಳಗಾವಿ: ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ವದಂತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.
ಯಾರಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ. ಈ ವದಂತಿಗಳನ್ನೆಲ್ಲ ಯಾರು ಹಬ್ಬಿಸುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇನ್ನೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ, ಅಧ್ಯಕ್ಷರ ಬದಲಾವಣೆ ಆಗುತ್ತಿದ್ರೆ ಅವರು ಇಲ್ಲೇಕೆ ಬರುತ್ತಿದ್ದರು ಎಂದು ಮರುಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ವಿಚಾರ ಸೇರಿದಂತೆ, ಸಿಎಂ ಸೀಟಿನ ಬಗ್ಗೆ ಮಾತಾಡುತ್ತಿದ್ದ ಸಚಿವರಿಗೆ ನೋಟಿಸ್ ನೀಡುವ ವದಂತಿಗೆ ತೆರೆ ಎಳೆದಿದ್ದಾರೆ.

Previous articleದಲಿತ ಸಿಎಂ ಹೈಕಮಾಂಡ್ ವಿವೇಚನೆಗೆ ಬಿಟ್ಟದ್ದು
Next articleಕಲೋತ್ಸವ ಆಚರಣೆ ವಿವಾದ: ಕಲ್ಲುತೂರಾಟ