ಯುಗಾದಿ ಬಳಿಕ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ

0
14
ಕಾಂಗ್ರೆಸ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿಂದು ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆ ದೆಹಲಿಯಲ್ಲಿ ನಡೆಯಿತು. ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರಲ್ಲಿ 71 ಜನ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೇ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತ ಅಭ್ಯರ್ಥಿಗಳಿಗೂ ಟಿಕೆಟ್‌ ನೀಡಲು ತೀರ್ಮಾನಿಸಲಾಗಿದ್ದು, ಯುಗಾದಿ ಬಳಿಕ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

Previous articleಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎನ್ನುವುದು ಸತ್ಯ: ಸಿ.ಟಿ ರವಿ
Next articleಕುಕ್ಕರ್‌ ಸ್ಫೋಟ: ಮಹಿಳೆಗೆ ಗಂಭೀರ ಗಾಯ