ಯುಪಿ ಮದರಸಾ ಕಾಯ್ದೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

0
19

ನವದೆಹಲಿ: ಉತ್ತರ ಪ್ರದೇಶ ಮದರಸಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಉತ್ತರ ಪ್ರದೇಶ ಬೋರ್ಡ್‌ ಆಫ್‌ ಮದರಸಾ ಎಜುಕೇಶನ್‌ ಆ್ಯಕ್ಟ್‌ 2004 ಅನ್ನು ರದ್ದುಗೊಳಿಸಿ ಅಲಹಾಬಾದ್‌ ಹೈಕೋರ್ಟ್‌ ಮಾರ್ಚ್‌ 22ರಂದು ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್‌ ಇಂದು ತಡೆ ನೀಡಿದೆ. ಮದರಸಾ ಶಿಕ್ಷಣ ಮಂಡಳಿ ಕಾಯ್ದೆ ಜಾರಿಗೊಳಿಸುವುದರಿಂದ ಜಾತ್ಯತೀತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂಬ ಅಲಹಾಬಾದ್ ಹೈಕೋರ್ಟ್‌ನ ತೀರ್ಪು ಸರಿಯಲ್ಲ ಎಂದು ನ್ಯಾಯಪೀಠವು ಹೇಳಿದೆ. ದರೊಂದಿಗೆ ಉತ್ತರ ಪ್ರದೇಶದ ಸುಮಾರು 17 ಲಕ್ಷ ಮದರಸಾ ವಿದ್ಯಾರ್ಥಿಗಳಿಗೆ ಭಾರತದ ಸುಪ್ರೀಂ ಕೋರ್ಟ್ ಭಾರೀ ರಿಲೀಫ್ ನೀಡಿದಂತಾಗಿದೆ.ಯುಪಿ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್-2004 ಅನ್ನು ರದ್ದುಗೊಳಿಸಿ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಶುಕ್ರವಾರ ಸುಪ್ರೀಂ ಕೋರ್ಟ್ ಇದಕ್ಕೆ ತಡೆಯಾಜ್ಞೆ ನೀಡಿದೆ.

Previous articleಸುಮಲತಾ ಅಂಬರೀಶ್​ ​​ಬಿಜೆಪಿ ಸೇರ್ಪಡೆ
Next articleಖರ್ಗೆ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ