ಯುವಕನ ಮೈಮೇಲೆ ಬಿದ್ದ ವಿದ್ಯುತ್ ಕಂಬ…

0
16

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕು ತುಂಬರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ದಿವೀತ್ ಎಂಬ ಯುವಕ ಬಸ್ ಇಳಿದು ಮನೆಗೆ ತೆರಳುತ್ತಿದ್ದ ಈ ವೇಳೆ ವಿದ್ಯುತ್ ಕಂಬ ಮೈಮೇಲೆ ಬಿದ್ದಿದೆ. ಯುವಕನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ‌ ಮುಂದೂವರೆದಿದೆ. ಅಲ್ಲಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸಿದ್ದರು ಗಾಳಿಯ ಆರ್ಭಟ ಜೋರಾಗಿದೆ.
ಬಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿದ್ದು ವಿದ್ಯುತ್ ಕಂಬಗಳು ಮರಗಳು ಧರೆಗುರುಳುತ್ತಿವೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ನಡೆಸುತ್ತಿದೆ.
ಮೇಸ್ಕಾಂ ಇಲಾಖೆ ಸಿಬ್ಬಂದಿಗಳು ಮಳೆಯ ನಡುವೆ ನಿರಂತರ ಹರಸಾಹಸ ಪಟ್ಟು ವಿದ್ಯುತ್ ಸಂಪರ್ಕ ಸರಿಪಡಿಸುತ್ತಿದ್ದರು ಬಾರೀ ಗಾಳಿಯ ಹೊಡೆತಕ್ಕೆ ಮರ, ವಿದ್ಯುತ್ ಕಂಬಗಳು ಬಿಳುತ್ತಿರುವುದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ.
ಭಾನುವಾರ ರಾತ್ರಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಅಂತಹದೆ ಘಟನೆ ಸೋಮವಾರ ನಡೆದಿದ್ದು ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ‌ ವಿದ್ಯುತ್ ಕಂಬ ಬಿದ್ದು ಸ್ವಲ್ಪದರಲ್ಲಿ ಪ್ರಣಾಪಾಯದಿಂದ ಪಾರಾಗಿದ್ದಾನೆ.

Previous articleರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣ
Next articleಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ….