Home News ರಕ್ಷಣಾ ತಂಡಕ್ಕೆ ಮಾಜಿ ಸಿಎಂ ಬೊಮ್ಮಾಯಿ ಅಭಿನಂದನೆ

ರಕ್ಷಣಾ ತಂಡಕ್ಕೆ ಮಾಜಿ ಸಿಎಂ ಬೊಮ್ಮಾಯಿ ಅಭಿನಂದನೆ

ಹುಬ್ಬಳ್ಳಿ: ಉತ್ತರ ಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವಲ್ಲಿ ಶ್ರಮಿಸಿರುವ ಎಲ್ಲ ತಂತ್ರಜ್ಞರು, ಅಧಿಕಾರಿಗಳಿಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಭಿನಂದನೆ ಸಲ್ಲಿಸಿದ್ದಾರೆ.
ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲು ವಿದೇಶದಿಂದ ನುರಿತ ತಜ್ಞರನ್ನು ಕರೆಯಿಸಿ, ಕಾರ್ಮಿಕರ ಜೀವ ರಕ್ಷಣೆ ಮಾಡುವಲ್ಲಿ ಮಾರ್ಗದರ್ಶನ ಮಾಡುವಲ್ಲಿ ಸಫಲರಾಗಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Exit mobile version