ರದ್ದಾದ ಕಾರ್ಡ್‌ಗಳಲ್ಲಿ ಯಾವುದೇ ಬಿಪಿಎಲ್ ಕುಟುಂಬಗಳಿಲ್ಲ

0
18

ದಾವಣಗೆರೆ: ರದ್ದಾದ ಕಾರ್ಡ್‌ಗಳಲ್ಲಿ ಯಾವುದೇ ಬಿಪಿಎಲ್ ಕುಟುಂಬಗಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ಕಟ್ಟುವ, ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದರು. ಅಂತಹವರ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಿದ್ದೇವೆ ಎಂದರು.
ಕೇಂದ್ರ ಸರ್ಕಾರ ನಬಾರ್ಡ್ ಮೂಲಕ ನೀಡುತ್ತಿದ್ದ ಅನುದಾನ ಕಡಿತ ಮಾಡಿ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಈ ಕುರಿತು ಬಿಜೆಪಿ ನಾಯಕರು ತುಟಿ ಬಿಚ್ಚಲ್ಲ ಎಂದು ಅವರು ಕಿಡಿಕಾರಿದರು.
ಕೋವಿಡ್ ಕಾಲದಲ್ಲಿ ದೊಡ್ಡ ಹಗರಣ ನಡೆದಿದೆ. ಇಡೀ ರಾಜ್ಯ ಸಂಕಷ್ಟದಲ್ಲಿ ಇದ್ದಾಗ ಕೆಲವರು ಕೋಟಿ ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಅಂತಹವರಿಗೆ ಶಿಕ್ಷೆ ವಿಧಿಸಲು ಎಸ್‌ಐಟಿ ರಚನೆ ಮಾಡಿದೆ. ಇದರಲ್ಲಿ ತಪ್ಪೇನು ಎಂದು ಅವರು ಪ್ರಶ್ನಿಸಿದರು.

Previous articleಪುಸ್ತಕ ಪ್ರಶಸ್ತಿಗಳಿಗಾಗಿ ಸಾಹಿತ್ಯ ಕೃತಿಗಳ ಆಹ್ವಾನ
Next articleಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ ಕರ್ನಾಟಕ