ರಬಕವಿ-ಬನಹಟ್ಟಿಗೆ ನೀರಿನ ಸಮಸ್ಯೆಯಿಲ್ಲ

0
11

ಬಾಗಲಕೋಟೆ: ರಬಕವಿ-ಬನಹಟ್ಟಿ ನಗರಗಳಿಗೆ ಇನ್ನೂ ಒಂದು ವಾರಗಳ ಕಾಲ ಯಾವುದೆ ನೀರಿನ ಸಮಸ್ಯೆ ಇಲ್ಲ. ಜನರು ನೀರನ್ನು ಮಿತವ್ಯಯವಾಗಿ ಬಳಸಿದರೆ ಇನ್ನಷ್ಟು ದಿನಗಳ ಕಾಲ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಭಾನುವಾರ ಇಲ್ಲಿನ ಕೃಷ್ಣಾ ನದಿಗೆ ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿ ಮಾತನಾಡಿದರು.
ಜಾಕವೆಲ್‌ಗಳಲ್ಲಿ ಮತ್ತು ನೀರು ಎತ್ತುವ ಮೋಟಾರ್ ಗಳಲ್ಲಿ ಸಮಸ್ಯೆ ಇದ್ದ ಕಾರಣ ನೀರಿನ ಸರಬರಾಜು ಆಗಿಲ್ಲ. ಈಗ ಯಾವುದೆ ಸಮಸ್ಯೆ ಇಲ್ಲ. ನದಿ ನೀರನ್ನು ಜನರು ಕಾಯಿಸಿ ಆರಿಸಿದ ನಂತರ ಕುಡಿಯಬೇಕು. ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಶಾಸಕ ಸವದಿ ತಿಳಿಸಿದರು.
ರಬಕವಿ-ಬನಹಟ್ಟಿ ನಗರಸಭೆಯ ಪೌರಾಯುಕ್ತ ಅಶೋಕ ಗುಡಿಮನಿ ಮಾತನಾಡಿ, ನೀರಿನ ಸಮಸ್ಯೆಯಾಗದಂತೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಗರಸಭೆಯ ವ್ಯಾಪ್ತಿಯಲ್ಲಿ 338 ಕೊಳವೆ ಬಾವಿಗಳಿದ್ದು, ಅವುಗಳಲ್ಲಿ ಇಪ್ಪತ್ತು ಕೊಳವೆ ಬಾವಿಗಳ ದುರಸ್ತಿ ಕಾರ್ಯ ನಡೆದಿದೆ. ಇನ್ನೂ 11 ತೆರೆದ ಬಾವಿಗಳಿಂದಲೂ ನೀರನ್ನು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Previous articleಅವೈಜ್ಞಾನಿಕ ಕಾಮಗಾರಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
Next articleವಿದ್ಯುತ್ ಬಿಲ್ ಕಟ್ಟಬೇಡಿ: ಸವದಿ ಸ್ಪಷ್ಟನೆ