ರಾಜಧಾನಿಯಾದ ಅಮರಾವತಿ

0
21

ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಲಾಗಿದೆ.
ಆಂಧ್ರ ಪ್ರದೇಶದ ಮುಖುಮಂತ್ರಿಯಾಗಿ ತೆಲುಗು ದೇಶಂ ಪಾರ್ಟಿಯ ನಾಯಕ ಚಂದ್ರಬಾಬು ನಾಯ್ಡು ಅಧಿಕೃತವಾಗಿ ಆಯ್ಕೆಯಾಗಿದೆ. ಜೂನ್‌ 12 ರಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಅವರು ಅಮರಾವತಿಯನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಘೋಷಿಸಿದ್ದಾರೆ. ಟಿಡಿಪಿ ಮುಖ್ಯಸ್ಥ, ನಿಯೋಜಿತ ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ರಾಜಧಾನಿ ಕುರಿತು ಮಾತನಾಡಿದ ಅವರು, ʼಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಲಿದೆ. ನಾವು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಕೆಲವು ಭಾಗಗಳನ್ನು ಮಾತ್ರವಲ್ಲ ಇಡೀ ರಾಜ್ಯದ ಏಳಿಗೆಗೆ ಕೊಡುಗೆ ನೀಡುತ್ತೇವೆʼʼ ಎಂದು ಅವರು ಭರವಸೆ ನೀಡಿದರು.

ಜನಸೇನಾ ಪಕ್ಷದ ನಾಯಕರಾಗಿ ಪವನ್ ಕಲ್ಯಾಣ್: ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಜನಸೇನಾ ಪಕ್ಷದ ನಾಯಕರನ್ನಾಗಿ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಶಾಸಕರು ಆಯ್ಕೆ ಮಾಡಿದ್ದಾರೆ.

Previous articleಯೋಗದ ವಿವಿಧ ಆಸನಗಳ ವಿಡಿಯೋ ಹಂಚಿಕೊಂಡ ಮೋದಿ
Next articleದಸರಾದಲ್ಲಿ ಭಾಗಿಯಾಗಿದ್ಧ ಆನೆ ಅಶ್ವತ್ಥಾಮ ಇನ್ನಿಲ್ಲ