Home ತಾಜಾ ಸುದ್ದಿ ರಾಜ್ಯದಲ್ಲಿ ಜಾತಿ ಜನಗಣತಿ ಮರು ಸಮೀಕ್ಷೆ

ರಾಜ್ಯದಲ್ಲಿ ಜಾತಿ ಜನಗಣತಿ ಮರು ಸಮೀಕ್ಷೆ

0

ನವದೆಹಲಿ: ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹೈಕಮಾಂಡ್ ನಾಯಕರೊಂದಿಗಿನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ(ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಪ್ರಸ್ತುತ ಜಾತಿ ಗಣತಿ ವರದಿ 10 ವರ್ಷ ಹಳೆಯದಾಗಿರುವ ಕಾರಣ ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸಮೀಕ್ಷೆ ನಡೆಸಲು ಸರ್ಕಾರ ನಿರ್ಧಾರಿಸಿದೆ, ಇಂದಿನ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆ ಮಾಡಿದ್ದೇವೆ. ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಬಗ್ಗೆ ಜೂನ್ 12 ರಂದು ಸಚಿವ ಸಂಪುಟ ಸಭೆಯಲ್ಲಿ ಕಾಲ ಮಿತಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Exit mobile version