ರಾಜ್ಯದ ಹಿತರಕ್ಷಣೆ ವಿಷಯದಲ್ಲಿ ರಾಜಿ ಇಲ್ಲ

0
24

ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆಯಿತು, ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು,

ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್‌ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್‌ 10 ರಂದು 1,5000 ಕ್ಯೂಸೆಕ್‌ ನೀರು ಬಿಡಲು ಸೂಚಿಸಿತ್ತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸಭೆಯಲ್ಲಿ ಮಾಹಿತಿ ಹಂಚಿಕೊಂಡರು.‌


ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಅಗತ್ಯವಿದೆ ಎಂಬ ಅಭಿಪ್ರಾಯದ ಜತೆಗೆ ಕಾನೂನು ಹೋರಾಟವೇ ಸರಿ ಎಂಬ ತೀರ್ಮಾನಕ್ಕೆ ಬರಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಹೋರಾಟಕ್ಕೆ ಸರ್ವಪಕ್ಷ ಸದಸ್ಯರು ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ, ಇದಕ್ಕೂ ಮುನ್ನ ಸಭೆಯ ಆರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನೀರಾವರಿ ವಿಷಯದಲ್ಲಿ ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಸ್ಪಷ್ಟಪಡಿಸಿ, ಸರ್ಕಾರದ ಕಾನೂನು ಹೋರಾಟ ಮುಂದುವರಿಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರ ಸಹಕಾರ ಕೋರಿದರು. ಇದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ.

Previous articleಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಬಂಧನ
Next articleಕಾವೇರಿ ನದಿಗಿಳಿದು ರೈತರ ಪ್ರತಿಭಟನೆ