Home ತಾಜಾ ಸುದ್ದಿ ರಾಜ್ಯಮಟ್ಟದ ಕಿತ್ತೂರು ಉತ್ಸವ ಸುವರ್ಣಾಕ್ಷರದಲ್ಲಿ ಬರೆದಿಡುವಂತಾಗಲಿ: ದೊಡ್ಡಗೌಡ್ರ

ರಾಜ್ಯಮಟ್ಟದ ಕಿತ್ತೂರು ಉತ್ಸವ ಸುವರ್ಣಾಕ್ಷರದಲ್ಲಿ ಬರೆದಿಡುವಂತಾಗಲಿ: ದೊಡ್ಡಗೌಡ್ರ

0
dodda Godar

ಬೆಳಗಾವಿ: ರಾಜ್ಯಮಟ್ಟದ ಕಿತ್ತೂರು ಉತ್ಸವ ಸುವರ್ಣ ಅಕ್ಷರದಲ್ಲಿ ಬರೆದಿಡುವಂತಾಗಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಿಸುವಂತೆ ಬೆಳೆಯಲಿದೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡ್ರ ಅವರು ತಿಳಿಸಿದರು.
ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಮಂಗಳವಾರ(ಅ.25) ನಡೆದ ಕಿತ್ತೂರು ಉತ್ಸವ-2022ರ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರತಿ ವರ್ಷ ವೀರಜ್ಯೋತಿ ಜಿಲ್ಲೆಯಲ್ಲಿ ಸಂಚರಿಸುತಿತ್ತು ಆದರೆ ರಾಜ್ಯಮಟ್ಟದ ಕಾರ್ಯಕ್ರಮವಾಗಿ ಘೋಷಿಸಿ, ವೀರಜ್ಯೋತಿ ರಾಜ್ಯಾದ್ಯಂತ ಸಂಚರಿಸುವಂತೆ ಅದ್ದೂರಿ ಉತ್ಸವ ಆಚರಣೆಗೆ ಚಾಲನೆ ನೀಡಿದ ಕೀರ್ತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲುತ್ತದೆ. ಕಳೆದ ವರ್ಷ ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಕಾರ್ಯಕ್ರಮ ಈಗ ರಾಜ್ಯಮಟ್ಟದ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಎಂದರು.

Exit mobile version