ರಾಯಚೂರು: ನಾಳೆ ಶಾಲೆಗಳಿಗೆ ರಜೆ ಘೋಷಣೆ

0
11


ರಾಯಚೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮಕೈಗೊಂಡಿರುವ ಜಿಲ್ಲಾಡಳಿತ ಜುಲೈ 27ರಂದು ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದೆ.
ಜಿಲ್ಲಾದ್ಯಂತ ಕಳೆದ ಒಂದುವಾರದಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಮಳೆಯಲ್ಲೇ ಮಕ್ಕಳು ಶಾಲೆಗೆ ಹೋಗುವಂತಾಗಿತ್ತು. ಅದರಲ್ಲೂ ಗ್ರಾಮೀಣ ಭಾಗದಿಂದ ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿತ್ತು. ಮಳೆಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಹಿನ್ನೆಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಆದೇಶಿಸಿದ್ದಾರೆ. ಹವಾಮಾನ ವರದಿ ಆಧರಿಸಿ ರಜೆ ಮುಂದುವರಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Previous articleನಿರಂತರ ಮಳೆ: ನಾಳೆ ಕೊಪ್ಪಳದಲ್ಲಿ ಶಾಲಾ-ಕಾಲೇಜಿಗೆ ರಜೆ
Next article27 ರಂದು ಧಾರವಾಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜು ರಜೆ