Home ತಾಜಾ ಸುದ್ದಿ ರಾಹುಲ್ ಗಾಂಧಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ರಾಹುಲ್ ಗಾಂಧಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

0

ರಾಂಚಿ : ‌ಅಮಿತ್ ಶಾ ಅವರ ವಿರುದ್ಧ 2018ರ ಚುನಾವಣೆಯ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬದಿಸಿದಂತೆ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಇಂದು ವಜಾಗೊಳಿಸಿದೆ.”
2019ರ ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭ ರಾಜಸ್ಥಾನದಲ್ಲಿ ರಾಹುಲ್ ಅವರು ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದರು. ಈ ಹೇಳಿಕೆ ಸಂಬಂಧ ಬಿಜೆಪಿ ಮುಖಂಡ ನವೀನ್ ಝಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಚುನಾವಣೆಯ ಸಂದರ್ಭದಲ್ಲಿ ನಡೆದ ಸಮಾವೇಶವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆಯುವ ವೀಡಿಯೊ ಕ್ಲಿಪ್ ವೈರಲ್ ಆಗಿತ್ತು.

Exit mobile version