ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

0
84

ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ.
ಸದ್ಯ ದೆಹಲಿ ಪ್ರವಾಸದಲ್ಲಿರುವ ಅವರು ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಅಂಭಾರಿಯ ಮೂರ್ತಿಯನ್ನು ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ₹138 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನ ಉದ್ಘಾಟಿಸಿರುವ ಅವರು ದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳು ಇವೆ. ಸುಭದ್ರ ರಾಜ್ಯ ನಿರ್ಮಾಣದಲ್ಲಿ ಎಲ್ಲರ ಭಾಗವಹಿಸುವಿಕೆ ಅಗತ್ಯವಾಗಿದ್ದು, ಕೇಂದ್ರ ಸರ್ಕಾರದ ಬಳಿ ಹಲವು ಕೆಲಸ ಕಾರ್ಯಗಳಿಗಾಗಿ ಅಧಿಕಾರಿಗಳು, ಸಚಿವರು, ಶಾಸಕರು ದೆಹಲಿಗೆ ಬರಬೇಕಾಗುತ್ತದೆ. ಇವರೆಲ್ಲರಿಗೂ ಕರ್ನಾಟಕ ಭವನ ತಂಗಲು ಸಹಾಯವಾಗುತ್ತದೆ ಎಂದರು. ಅಲ್ಲದೆ, ಕರ್ನಾಟಕ ಭವನ-2ರ ಪುನರ್ ನಿರ್ಮಾಣ ಮಾಡುವ ಯೋಜನೆಯೂ ಇದೆ ಎಂದಿದ್ದರು.

Previous articleಹಳೆ ದಾಖಲೆಗಳನ್ನು ಮುರಿದು ಇತಿಹಾಸದ ಅಧ್ಯಾಯ ಬರೆದ KSDL
Next articleವಿದ್ಯುತ್ ಅವಘಡದಿಂದ ಶಿಕ್ಷಕಿ ಸಾವು