Home ತಾಜಾ ಸುದ್ದಿ ರಾ ಸಂಸ್ಥೆಯ ಮುಖ್ಯಸ್ಥರಾಗಿ ರವಿ ಸಿನ್ಹಾ ನೇಮಕ

ರಾ ಸಂಸ್ಥೆಯ ಮುಖ್ಯಸ್ಥರಾಗಿ ರವಿ ಸಿನ್ಹಾ ನೇಮಕ

0

ಹೊಸದಿಲ್ಲಿ : ದೇಶದ ಬೇಹುಗಾರಿಕಾ ಸಂಸ್ಥೆ RAW ಗೆ ಹೊಸ ಮುಖ್ಯಸ್ಥರು ನೇಮಕವಾಗಿದ್ದಾರೆ. ಛತ್ತೀಸ್‌ಗಢ ಕೇಡರ್‌ನ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ಅವರನ್ನು ರಾ (RAW) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಎರಡು ವರ್ಷಗಳ ಅವಧಿಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಕಾರ್ಯದರ್ಶಿಯನ್ನಾಗಿ ರವಿ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಪ್ರಸ್ತುತ ರಾ ಮುಖ್ಯಸ್ಥರಾಗಿರುವ ಸಮಂತ್ ಗೋಯೆಲ್ ಅವರು ಅಧಿಕಾರಾವಧಿಯನ್ನು ಜೂನ್ 30 ರಂದು ಪೂರ್ಣಗೊಳಿಸಿದ ನಂತರ ಸಿನ್ಹಾ ಅವರು ಉತ್ತರಾಧಿಕಾರಿಯಾಗಲಿದ್ದಾರೆ ಮತ್ತು ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಸಿಬಂದಿ ಸಚಿವಾಲಯದ ಆದೇಶ ತಿಳಿಸಿದೆ.ಸಿನ್ಹಾ, 1988 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕ್ಯಾಬಿನೆಟ್ ಸೆಕ್ರೆಟರಿಯಟ್‌ನ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎರಡು ವರ್ಷಗಳ ಅವಧಿಗೆ RAW ಕಾರ್ಯದರ್ಶಿಯಾಗಿ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Exit mobile version