Home ನಮ್ಮ ಜಿಲ್ಲೆ ರೈತರ ಆತ್ಮಹತ್ಯೆ: ಸಿದ್ದರಾಮಯ್ಯ ಸಾಧನೆಯ ಕಿರುನೋಟ

ರೈತರ ಆತ್ಮಹತ್ಯೆ: ಸಿದ್ದರಾಮಯ್ಯ ಸಾಧನೆಯ ಕಿರುನೋಟ

0

ಬೆಂಗಳೂರು: ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸಿದ್ದರಾಮಯ್ಯ ಸಾಧನೆಯ ಕಿರುನೋಟ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಜೆ. ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಗಳ ಸುದ್ದಿ ತುಣುಕುಗಳನ್ನು ತೋರಿಸುತ್ತಾ ಸರ್ಕಾರದ ಮೇಲೆ ಮಾಜಿ ಪ್ರಧಾನಿಗಳು ಪ್ರಹಾರ ನಡೆಸಿದರು. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸಿದ್ದರಾಮಯ್ಯ ಸಾಧನೆಯ ಕಿರುನೋಟ, ಈ ಪಕ್ಷ ಉಳಿಯಲ್ಲ ಎನ್ನುತ್ತೀರಲ್ಲ ಸಿದ್ದರಾಮಯ್ಯ ಅವರೇ ನಿಮ್ಮ ಕಲ್ಪನೆ ಏನು? ನಿಮಗೆ ತಾಳ್ಮೆ ಇರಲಿ, ಮುಂದೆ ಬರಲಿರುವ ದಿನಗಳನ್ನು ನೀವು ಕಣ್ಣಿಂದ ನೋಡುತ್ತೀರಿ, ಜೆಡಿಎಸ್ ಮುಗಿಯುತ್ತದೆಯೋ ಅಥವಾ ಯಾರು ಮುಗಿಯುತ್ತಾರೆ ಎನ್ನುವುದನ್ನು ನೋಡಲು ನೀವೂ ಇರುತ್ತೀರಿ ನಾನೂ ಇರುತ್ತೇನೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಿದೆ. ಹಾಲಿನ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

Exit mobile version