ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

0
27

ಬೆಂಗಳೂರು: ಒಡಿಶಾದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಲಾಗಿದೆ.
ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.

Previous articleರೈಲು ದುರಂತ: ಪ್ರಧಾನಿ ಮೋದಿ ತುರ್ತು ಸಭೆ
Next articleಬಾಡಿಗೆ ಮನೆಯಲ್ಲಿರುವವರಿಗೂ ಗೃಹಜ್ಯೋತಿ ಸೌಲಭ್ಯ