ಬೀದರ್ : ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ಸಿತಳಗೇರಾ ಗ್ರಾಮದ ಬಳಿ ಶನಿವಾರ ಸಂಜೆ ಲಘು ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ೨.೬ ರಷ್ಟು ತೀವ್ರತೆ ದಾಖಲಾಗಿದೆ. ಯಾವುದೇ ಅವಘಡ ಸಂಭವಿಸಿರುವುದಿಲ್ಲ. ಯಾವುದೇ ಕಾರಣಕ್ಕೆ ಜನರು ಆತಂಕಕ್ಕೆ ಒಳಗಾಗದಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮನವಿ ಮಾಡಿದ್ದಾರೆ.