ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕ್ಷೇತ್ರಗಳ ಮರುವಿಗಂಡಣೆ ವಿಚಾರ ಬಗ್ಗೆ ಚರ್ಚೆ ನಡೆಯುತ್ತಿದೆ. ದಕ್ಷಿಣ ಭಾರತದವರು ಜನಸಂಖ್ಯೆ ನಿಯಂತ್ರಣ ಮಾಡಿಕೊಂಡು ಬಂದಿದ್ದೇವೆ. ಯಾವ ಮಾನದಂಡದಿಂದ ಮರುವಿಗಂಡಣೆ ಮಾಡಲಾಗುತ್ತಿದೆ ಎಂಬ ಕುರಿತು ಎಲ್ಲರಲ್ಲಿಯೂ ಆತಂಕವಿದೆ. ಎಲ್ಲ ರಾಜಕೀಯ ಪಕ್ಷಗಳು ಸೇರಿ ಈ ಬಗ್ಗೆ ಹೆಚ್ಚಿನ ಚರ್ಚೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೋದಿ ಅವರು ನೋಟು ಅಮಾನ್ಯೀಕರಣ ಆದ ಮೇಲೆ ಭ್ರಷ್ಟಾಚಾರ, ಬ್ಲ್ಯಾಕ್ ಮನಿ ಕಡಿವಾಣ ಆಗಲಿದೆ ಎಂದು ತಿಳಿಸಿದ್ದರು. ಇತ್ತೀಚಿಗೆ ನ್ಯಾಯಾಧೀಶರ ಮನೆಯಲ್ಲಿ ಹಣ ಸಿಕ್ಕಿದೆ. ಅದೇ ರಾಜಕಾರಣಿಗಳು, ಉದ್ಯಮಿಗಳ ಮನೆಯಲ್ಲಿ ಸಿಗುತ್ತಿದೆ. ಸದ್ಯ ಎಲ್ಲ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಚರ್ಚೆ ಆಗಬೇಕು. ಮುಂದಿನ ದಿನಗಳಲ್ಲಿ ಬದಲಾಗಿ, ಹೊಸ ರಾಜಕಾರಣ ಬರಬೇಕಾಗಿದೆ ಎಂದರು.