Home ನಮ್ಮ ಜಿಲ್ಲೆ ಕಲಬುರಗಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ

ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ

0

ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಪ್ರಯುಕ್ತ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಾಳೆ ಸಭೆ ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜತೆ ಮಾತನಾಡಿ, ಸಭೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಗುವುದು. ಆ ನಿಟ್ಟಿನಲ್ಲಿ ಅನಿರೀಕ್ಷಿತ ಬೆಳವಣಿಗೆ ದೊಡ್ಡದಾಗೇನು ನಿರೀಕ್ಷಿತವಿಲ್ಲ ಎಂದ ಅವರು, ಇನ್ನು ದೇಶದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಇಂಡಿಯಾ ಒಕ್ಕೂಟ ಒಂದಾಗಿ, ಒಗ್ಗಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದ್ದೇವೆ. ಮತ್ತು ಅದೇ ರೀತಿ ಒಂದಾಗಿ ಕೆಲಸ ನಿರ್ವಹಿಸುತ್ತೇವೆ. ನಾಳೆ ದೆಹಲಿಯಲ್ಲಿ ಅನೇಕ ಘಟಕಗಳ ಮೀಟಿಂಗ್ ಕರೆದಿದ್ದೇವೆ. ಎಲ್ಲಾ ಮತಕ್ಷೇತ್ರಗಳಿಗೆ ಈಗಾಗಲೇ ವೀಕ್ಷಕರನ್ನು ನೇಮಕ ಮಾಡಿದ್ದೇವೆ ಎಂದರು.

Exit mobile version