Home ತಾಜಾ ಸುದ್ದಿ ಲೋಕಸಭಾ ಚುನಾವಣೆಗೆ ನಾನೂ ಟಿಕೆಟ್ ಆಕಾಂಕ್ಷಿ

ಲೋಕಸಭಾ ಚುನಾವಣೆಗೆ ನಾನೂ ಟಿಕೆಟ್ ಆಕಾಂಕ್ಷಿ

0


ಹುಬ್ಬಳ್ಳಿ : ಧಾರವಾಡ ಉತ್ತರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಬಯಸಿದ್ದು, ನಾನೂ ಟಿಕೆಟ್ ಆಕಾಂಕ್ಷಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ, ಹಿರಿಯ ವಕೀಲರಾದ ಮೋಹನ ಲಿಂಬಿಕಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಉತ್ತರ ಲೋಕಸಭಾ ಕ್ಷೇತ್ರ ಹೊಸದೇನಲ್ಲ. ಕ್ಷೇತ್ರವ್ಯಾಪಿ ಅಪಾರ ಬೆಂಬಲಿಗರು, ಹಿತೈಷಿಗಳು ಇದ್ದಾರೆ. ಹಿಂದೆ ವಿಧಾನ ಪರಿಷತ್ ಸದಸ್ಯನಾಗಿದ್ದಾಗ ಕೆಲಸ ಮಾಡಿದ್ದೇನೆ. ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದೇನೆ.ಹೀಗಾಗಿ ಲೋಕ ಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದರು.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿದ್ದೇನೆ. ಅವರೂ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಟಿಕೆಟ್ ಸಿಗುವ ಭರವಸೆ ಇದೆ ಎಂದು ಹೇಳಿದರು.

Exit mobile version