Home ತಾಜಾ ಸುದ್ದಿ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಹುದು

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಹುದು

0

ಹುಬ್ಬಳ್ಳಿ : ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಹುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಒಂದಿಲ್ಲೊಂದು ರಾಜಕೀಯ ಪಕ್ಷ ಮೈತ್ರಿ ಮಾಡಿಕೊಳ್ಳುತ್ತವೆ. ಕಳೆದ ಬಾರಿ ನಾವು (ಕಾಂಗ್ರೆಸ್) ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದೆವು. ಇದೂ ಹಾಗೆಯೇ. ಈಗ ಬಿಜೆಪಿಯರಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬಹುದು. ಅದರಲ್ಲೇನು ವಿಶೇಷ ಇಲ್ಲ. ಇದೆಲ್ಲ ಅವರವರ ಪಕ್ಷಕ್ಕೆ ಬಿಟ್ಟ ವಿಚಾರ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನಗಳನ್ನುಗಳಿಸಿ ದೇಶದಲ್ಲಿ ಅಧಿಕಾರಕ್ಕೆ  ಬರಲಿದೆ ಎಂದರು.

Exit mobile version