ವಂದೇ ಭಾರತ್‌ ರೈಲಿಗೆ ಕಲ್ಲು

0
27

ದಾವಣಗೆರೆ: ಇತ್ತೀಚೆಗಷ್ಟೇ ಆರಂಭಗೊಂಡಿದ್ದ ಧಾರವಾಡ-ಬೆಂಗಳೂರು ನಡುವಿನ ವಂದೇ ಭಾರತ್‌ ರೈಲಿಗೆ ಕಲ್ಲು ತೂರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಹೊರವಯಲದಲ್ಲಿರುವ ಜಿಎಂಐಟಿ ಕಾಲೇಜಿನ ಹಿಂಭಾಗ ಚಲಿಸುತ್ತಿದ್ದ ವಂದೇ ಭಾರತ್‌ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜು ಜಖಂಗೊಂಡಿದೆ. ಆದರೆ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.
ನೈಋತ್ಯ ರೈಲ್ವೆಯ ಅಧಿಕಾರಿಗಳು ಈ ಘಟನೆಯನ್ನು ಆರ್‌ಪಿಎಫ್ ಸಿಬ್ಬಂದಿಗೆ ವರದಿ ಮಾಡಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆಗೆ ಸೂಚಿಸಿದ್ದಾರೆ.

Previous articleಡಬಲ್‌ ಅಲ್ಲ ತ್ರಿಬಲ್‌ ಎಂಜಿನ್‌ ಸರ್ಕಾರ
Next articleಬೋಗಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಹೋರಾಟ