Home ತಾಜಾ ಸುದ್ದಿ ವರುಣ ಕ್ಷೇತ್ರದಿಂದ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ

ವರುಣ ಕ್ಷೇತ್ರದಿಂದ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ

0

ವರುಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಇಂದು ನಾಮಪತ್ರ ಸಲ್ಲಿಸಿದರು.
ನಂಜನಗೂಡಿನ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಹಾಜರಿದ್ದರು.
ಇದಕ್ಕೂ ಮುನ್ನ ಬೆಳಗ್ಗೆ ಕೋಟೆ ಆಂಜನೇಯ ಹಾಗೂ ಚಾಮುಂಡೇಶ್ವರಿ ದೇವಿಗೆ ವಿ.ಸೋಮಣ್ಣ ಪೂಜೆ ಸಲ್ಲಿಸಿದರು. ನಂತರ ನಂಜನಗೂಡಿನ ಗೂಳೂರು ಸರ್ಕಲ್​ನಲ್ಲಿ ಸಿ ಎಂ.ಬಸವರಾಜ ಬೊಮ್ಮಾಯಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Exit mobile version