ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿಗೆ ಪ್ರವೇಶ: ಮೂರನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟ

0
28

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದ್ದು. ಜುಲೈ 13ರೊಳಗೆ ಸಂಬಂಧಪಟ್ಟ ಶಾಲೆಗಳಲ್ಲಿ ಪ್ರವೇಶ ಪಡೆಯಬೇಕು ಎಂದು ತಿಳಿಸಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ | ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ|| ಬಿ.ಆರ್. ಅಂಬೇಡ್ಕರ್ | ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ | ಕವಿರನ್ನ / ಗಾಂಧಿತತ್ವ | ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಚೆ / ಆಯ್ಕೆಗಳ ಆಧಾರದ ಮೇಲೆ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 10-07-2024 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.
ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 13-07-2024 ರ ಸಂಜೆ 5.30 ರ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದು ತಿಳಿಸಿದೆ.

Previous articleಟಾಸ್ ಗೆದ್ದ ಟೀಂ ಇಂಡಿಯಾ
Next articleರಾಜ್ಯದಲ್ಲಿ ಸಾವಿರಾರು ಉದ್ಯೋಗ ಅವಕಾಶ ಸೃಷ್ಟಿಯಾಗಲಿದೆ