SK Home Ad
Home ತಾಜಾ ಸುದ್ದಿ ವಾಣಿಜ್ಯನಗರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ: ಲಘು ಲಾಠಿ‌ ಪ್ರಹಾರ

ವಾಣಿಜ್ಯನಗರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ: ಲಘು ಲಾಠಿ‌ ಪ್ರಹಾರ

0
214
ಎಸ್‌ಡಿಪಿಐ

ಹುಬ್ಬಳ್ಳಿ: ಎಸ್‌ಡಿಪಿಐ ಹಾಗೂ ಪಿಎಫ್ಐ ಮೇಲೆ ಎನ್ಐಎ ದಾಳಿ ವಿಚಾರವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ, ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕಾರ್ಯಕರ್ತರು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿದ ಘಟನೆ‌ ನಡೆದಿದೆ.
ಹುಬ್ಬಳ್ಳಿಯ ಕೌಲ್ ಪೇಟೆಯಲ್ಲಿ ಪ್ರತಿಭಟನೆ ನಡೆಸಿದ್ದು, ಪುನಾ ಬೆಂಗಳೂರು ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.
ಗೋ ಬ್ಯಾಕ್ ಎನ್ಐಎ, ಗೋ ಬ್ಯಾಕ್ ಎನ್ಐಎ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಗಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.