ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳ ‘ಶಿವಶಕ್ತಿ ಪಾಯಿಂಟ್’

0
19

ಬೆಂಗಳೂರು: ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ ಎಂದು ಪ್ರದಾನಿ ನರೇಂದ್ರ ಮೋದಿ ಹೇಳಿದ್ದಾರೆ, ನಗರದ ಪೀಣ್ಯದಲ್ಲಿರುವ ಇಸ್ರೋ ಕಚೇರಿಯಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಚಂದ್ರಯಾನ 3 ಅನ್ನು ಚಂದ್ರನ ಮೇಲೆ ಲ್ಯಾಂಡರ್‌ ಇಳಿದ ಸ್ಥಳಕ್ಕೆ ಶಿವಶಕ್ತಿ ಪಾಯಿಂಟ್ ಎಂದು ನಾಮಕರಣ ಮಾಡಿದರು. ಅಲ್ಲದೆ ಚಂದ್ರಯಾನ 2 ಚಂದ್ರನ ಮೇಲೆ ತನ್ನ ಹೆಜ್ಜೆಗುರುತುಗಳನ್ನು ಬಿಟ್ಟ ಸ್ಥಳವನ್ನು ‘ತಿರಂಗ 2’ ಪಾಯಿಂಟ್ ಎಂದು ಹೆಸರಿಸಲಾಗುವುದು ಎಂದು ಪ್ರಧಾನಿ ಘೋಷಿಸಿದರು. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು.

Previous articleವೆಂಕಟೇಶ ದರ್ಶನ ಪಡೆದ ಬ್ರಾಹ್ಮಣ ಮಹಾಸಭಾ ಪದಾಧಿಕಾರಿಗಳು
Next article‘ಚಂದ್ರಯಾನ-2’: ತಿರಂಗಾ ಪಾಯಿಂಟ್