Home ಅಪರಾಧ ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ

0

ವಿಜಯಪುರ: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಭೀಕರ ಹಲ್ಲೆ ನಡೆಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ಝೆಂಡಾಕಟ್ಟಾ ಬಳಿ ನಡೆದಿದೆ.
ಕೊಲೆಗೀಡಾದ ಯುವಕನನ್ನು ಜುಮ್ಮಾಮಸೀದಿ ಏರಿಯಾದ ಸಾಹೀಲ್ ಭಾಂಗಿ (೨೧) ಎಂದು ಗುರುತಿಸಲಾಗಿದೆ. ಯುವಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿರುವುದರಿಂದಾಗಿ ಮುಖ ಸಂಪೂರ್ಣ ಜಜ್ಜಿ ಹೋಗಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಭಗವಾನ್ ಸೋನಾವನೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version