ವಿಜಯೇಂದ್ರ ಅಧ್ಯಕ್ಷರನ್ನಾಗಿ ಮುಂದುವರಿಸಲು ನಿಷ್ಠರ ಸಭೆ ನಿರ್ಣಯ

0
37

ದಾವಣಗೆರೆ: ದಾವಣಗೆರೆಯಲ್ಲಿ ನಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿಷ್ಠರ ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯವರೆಗೆ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರಿಸುವುದು, ಬಿ.ಎಸ್.ಜನ್ಮದಿನ ಅಂಗವಾಗಿ 2025ರ ಫೆಬ್ರವರಿ 25 ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಆಯೋಜಿಸುವ ಮೂಲಕ 20 ಲಕ್ಷ ಜನ ಸೇರಿಸಿ ಪಕ್ಷ ಸಂಘಟನೆ ಮಾಡುವುದು ಸೇರಿದಂತೆ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ತಿಳಿಸಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆಯಲ್ಲಿ ನಡೆದ ಸಭೆ ಯಾರ ವಿರುದ್ಧವೂ ಅಲ್ಲ, ಪಕ್ಷ ಸಂಘಟನೆ ದೃಷ್ಟಿಯಿಂದ ನಡೆದ ಸಭೆ. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷವನ್ನು ಸದೃಢವಾಗಿ ಬೆಳೆಸಿ ಅಧಿಕಾರಕ್ಕೆ ತರುವ ಉದ್ದೇಶದಿಂದ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

Previous articleಸಂಸ್ಕೃತಿ, ಪರಂಪರೆ ನಾಶವಾದರೆ ಸರ್ವಸ್ವವೂ ನಾಶ
Next articleಉತ್ತರ ಕರ್ನಾಟಕ ಸಮಸ್ಯೆ ಕುರಿತು ಮೂರು ದಿನ ಚರ್ಚೆ