ವಿದ್ಯಾರ್ಥಿ ನಾಪತ್ತೆ: ರೈಲ್ವೇ ಹಳಿ ಬಳಿ ಮೊಬೈಲ್ ಫೋನ್ ಪತ್ತೆ

0
25

ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.

ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(೧೭) ನಾಪತ್ತೆಯಾದ ವಿದ್ಯಾರ್ಥಿ.

ಆತ ಫೆ. ೨೫ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ.

ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕರಾವಳಿ ಬಿಸಿಗಾಳಿ: ಯೆಲ್ಲೋ ಆಲರ್ಟ್
Next articleಶಿವರಾತ್ರಿ: ಧಮಸ್ಥಳಕ್ಕೆ ಲಕ್ಷಾಂತರ ಭಕ್ತರು