ವಿದ್ಯುತ್ ಬಳಕೆದಾರರಿಗೆ ಗುಡ್​​ನ್ಯೂಸ್

0
16

ಬೆಂಗಳೂರು: ವಿದ್ಯುತ್ ಬಳಕೆದಾರರಿಗೆ ರಾಜ್ಯ ಸರ್ಕಾರ ಗುಡ್​​ನ್ಯೂಸ್ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆಯ ವಿದ್ಯುತ್ ಮೇಲೆ ಪ್ರತಿ ಯೂನಿಟ್​ಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್​ 1ರಿಂದಲೇ ಅನ್ವಯವಾಗಲಿದೆ.

Previous articleಎಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
Next articleಪ್ರಧಾನಿ ಮೋದಿ ಗ್ಯಾರಂಟಿ ಮೇಲೆ ವಿಶ್ವಾಸವಿಡಿ