ವಿಧಾನಪರಿಷತ್ ಚುನಾವಣೆ: ಜಗದೀಶ್‌ ಶೆಟ್ಟರ್‌ ನಾಮಪತ್ರ ಸಲ್ಲಿಕೆ

0
39

ಬೆಂಗಳೂರು: ರಾಜ್ಯ‌ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಕಾಂಗ್ರೆಸ್ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದರು.
ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ 3 ವಿಧಾನಪರಿಷತ್‌ ಸ್ಥಾನಗಳಿಗೆ ಇಂದು ಕಾಂಗ್ರೆಸ್‌ ಅಭ್ಯರ್ಥಿಗಳಾದ ಜಗದೀಶ್‌ ಶೆಟ್ಟರ್‌, ಎನ್‌.ಎಸ್‌ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರ್ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಎಂಬಿ ಪಾಟೀಲ್, ಸಚಿವರಾದ ಮಧು ಬಂಗಾರಪ್ಪ,ಕೆಎಚ್ ಮುನಿಯಪ್ಪ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸಲು ಜೂನ್ 20 ಕಡೆಯ ದಿನ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸಾತಿಗೆ ಜೂನ್ 23ರಂದು ಅಂತಿಮ ದಿನವಾಗಿದೆ.

Previous articleಸತತ 12ನೇ ಬಾರಿ ಬಿಜೆಪಿ ಅಭ್ಯರ್ಥಿ ಮೇಯರ್‌
Next articleಹ್ಯಾಕ್ ಮಾಡಿ ಸರ್ವರ್ ಡೌನ್ ಮಾಡಿದ್ದಾರೆ