ನಾನು ಅವರ ಹೆಸರನ್ನೂ ಪ್ರಸ್ತಾಪಿಸುವುದಿಲ್ಲ ಆದರೆ…
ಲಕ್ನೋ: ವಿಧಾನಸಭೆಯೊಳಗೆ ಶಾಸಕರೊಬ್ಬರು ಪಾನ್ ಮಸಾಲ ಅಗಿದು, ಉಗಿದ ಘಟನೆ ನಡೆದಿದೆ.
ಉತ್ತರ ಪ್ರದೇಶದ ವಿಧಾನಸಭೆಯಲ್ಲಿಂದು ಶಾಸಕರೊಬ್ಬರು ಪಾನ್ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿದ್ದಾರೆ. ಈ ವಿಷಯ ತಿಳಿದ ಸ್ಪೀಕರ್, ಕಲಾಪ ಆರಂಭಕ್ಕೂ ಮುನ್ನವೇ ಮಾತನಾಡಿ, ಇಂದು ಬೆಳಗ್ಗೆ ಮಾನ್ಯ ಸದಸ್ಯರೊಬ್ಬರು ನಮ್ಮ ವಿಧಾನಸೌಧದ ಈ ಸಭಾಂಗಣದಲ್ಲಿ ಪಾನ್ ಮಸಾಲ ಸೇವಿಸಿದ ನಂತರ ಉಗುಳಿದ್ದಾರೆ, ನಾನು ಬರುವಾಗ ಅದನ್ನು ನೋಡಿದೆ ಮತ್ತು ಅದನ್ನು ಸ್ವಚ್ಛಗೊಳಿಸಿದೆ. ಆದರೆ ನಾನು ಉಗುಳಿದ ಶಾಸಕರನ್ನು ವಿಡಿಯೋನಲ್ಲಿ ನೋಡಿದ್ದೇನೆ. ಶಾಸಕರು ಉಗಿಳಿದವರನ್ನು ವೀಡಿಯೊದಲ್ಲಿ ನೋಡಿದ್ದರು, ಅವರಿಗೆ ಅವಮಾನ ಆಗಬಾರದೆಂದು ನಾನು ಯಾರ ಹೆಸರನ್ನು ಹೇಳುವುದಿಲ್ಲ. ವಿಧಾನಸಭೆಯನ್ನು ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿಯಾಗಿರುವುದರಿಂದ, ಅಂತಹ ನಡವಳಿಕೆ ಕಂಡಲ್ಲಿ ಎಲ್ಲಾ ಸದಸ್ಯರು ಮಧ್ಯಪ್ರವೇಶಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಇನ್ಮುಂದೆ ಯಾರಾದ್ರೂ ಈ ರೀತಿ ಮಾಡುವುದು ಕಂಡರೆ ಅದನ್ನು ತಡೆಯಬೇಕು ಅಂತ ನಾನು ಎಲ್ಲಾ ಸದರಿಗೆ ಇತ್ತಾಯಿಸುತ್ತೇನೆ. ಈ ಸಭೆಯಲ್ಲಿ ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿ. ಇಂದು ಮಾಡಿದ ತಪ್ಪನ್ನು ಶಾಸಕರು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡರೆ, ಅದನ್ನು ಪ್ರಶಂಸಿಸಲಾಗುತ್ತದೆ ಇಲ್ಲದಿದ್ದರೆ, ಇಲ್ಲದಿದ್ದರೆ ನಾನೇ ಅವರನ್ನು ಕರೆಯುತ್ತೇನೆ ಎಂದು ಎಚ್ಚರಿಸಿದರು.