Home Advertisement
Home ತಾಜಾ ಸುದ್ದಿ ವಿಧಾನ ಪರಿಷತ್‌ ಸ್ಥಾನಕ್ಕೆ ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್ ಹೆಸರಿಗೆ ಅನುಮೋದನೆ

ವಿಧಾನ ಪರಿಷತ್‌ ಸ್ಥಾನಕ್ಕೆ ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್ ಹೆಸರಿಗೆ ಅನುಮೋದನೆ

0
95

ಬೆಂಗಳೂರು: ವಿಧಾನ ಪರಿಷತ್‌ಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಶಿಫಾರಸು ಮಾಡಿದ್ದ ಮೂವರ ಹೆಸರುಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶನಿವಾರ ಅನುಮೋದನೆ ನೀಡಿದ್ದಾರೆ.
ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್. ಸೀತಾರಾಮ್ ಹಾಗೂ ಸಮಾಜ ಸೇವೆ ಹೆಸರಲ್ಲಿ ಸುಧಾಮ್ ದಾಸ್ ಅವರಿಗೆ ನಾಮನಿರ್ದೇಶನ ಮಾಡುವಂತೆ ಕೋರಿ ಶಿಫಾರಸು ಮಾಡಲಾಗಿತ್ತು. ಇದೀಗ ಮೂವರ ನಾಮ ನಿರ್ದೇಶನಕ್ಕೆ ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿದೆ.

Previous articleದಾವಣಗೆರೆಯ ದಂಪತಿ ಅಮೇರಿಕಾದಲ್ಲಿ ಅನುಮಾನಸ್ಪದ ಸಾವು!
Next articleನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಬೈಕ್‌: ಯುವಕ ಸಾವು, ಯುವತಿ ಪಾರು