ವಿವಾದಾತ್ಮಕ ಹೇಳಿಕೆ ಶಾಸಕ ಪೂಂಜ ವಿರುದ್ಧ ದೂರು

0
22

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರವರು ೨೪ ಮಂದಿ ಜನರನ್ನು ಹತ್ಯೆ ಮಾಡಿರುವುದಾಗಿ ಸುಳ್ಳು ಆರೋಪ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಕಾಂಗ್ರೆಸ್ ಮುಖಂಡರು ಪುತ್ತೂರು ನಗರ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.
ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೪ ಜನರನ್ನು ಹತ್ಯೆ ಮಾಡಿರುವುದಾಗಿ ಹೇಳಿದ್ದಾರೆ. ಈ ಕುರಿತು ವೀಡಿಯೋ ಚಿತ್ರಣವೂ ಇದೆ. ಮುಖ್ಯಮಂತ್ರಿಗಳ ವಿರುದ್ಧ ಈ ರೀತಿಯ ಆರೋಪ ಮಾಡಿರುವುದು ಸರಿಯಲ್ಲ. ಆದ್ದರಿಂದ ಹರೀಶ್ ಪೂಂಜ ಅವರನ್ನು ತನಿಖೆ ಮಾಡಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ ಬನ್ನೂರು, ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋನು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Previous articleʼಡಿ.ಕೆ. ಸುರೇಶ್‌ ನನಗೆ ವಾರ್ನಿಂಗ್‌ ಮಾಡಿಲ್ಲ, ನಾನೂ ವಾರ್ನಿಂಗ್‌ ಕೊಟ್ಟಿಲ್ಲʼ
Next article40 ಪರ್ಸೆಂಟ್ ತನಿಖೆ ನನ್ನಿಂದಲೇ ಆರಂಭವಾಗಲಿ