Home ತಾಜಾ ಸುದ್ದಿ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ

ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ

0

ಮಲೆನಾಡ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ

ಬೆಂಗಳೂರು: ಜೋಗ ಜಲಪಾತದ ಆವರಣದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸಮಗ್ರ ಅಭಿವೃದ್ಧಿ ನಡೆದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ವಿಶ್ವಪ್ರಸಿದ್ಧ ನಮ್ಮ ಮಲೆನಾಡಿನ ಮುಕುಟಮಣಿ “ರಾಜ-ರಾಣಿ-ರೋರರ್ – ರಾಕೆಟ್” ಎಂಬ ಹೆಸರಿನಿಂದ ಜಗದ್ವಿಖ್ಯಾತಗಳಿಸಿರುವ “ಜೋಗ ಜಲಪಾತ” ಕ್ಕೆ ಇಂದು ಭೇಟಿ ನೀಡಿ ಕಳೆದ ಅವಧಿಯ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಹಯೋಗದಲ್ಲಿ ಜಲಪಾತದ ಆವರಣದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸಮಗ್ರ ಅಭಿವೃದ್ಧಿಗೆ ಹಾಗೂ ವರ್ಷ ಪೂರ್ತಿ ಜಲಪಾತದ ವೈಭವವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುವ ಸದುದ್ದೇಶದಿಂದ ಸುಮಾರು 185 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಐತಿಹಾಸಿಕ ಕಾಮಗಾರಿಗಳನ್ನು ಪರಿವೀಕ್ಷಣೆ ನಡೆಸಿ ಸ್ಥಳದಲ್ಲಿದ್ದ ಅಧಿಕಾರಿ ವರ್ಗದವರಿಗೆ ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಲಾಯಿತು ಎಂದಿದ್ದಾರೆ.

Exit mobile version