ವಿಶ್ವವಿದ್ಯಾಲಯದಲ್ಲಿ ಆರ್ಥಿಕ ಸಂಶೋಧನಾ ಅಧ್ಯಯನಕ್ಕೆ ಚಿಂತನೆ

0
20

ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಆರ್ಥಿಕ ಸಂಶೋಧನಾ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪನೆ

ಬೆಳಗಾವಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ ಮನಮೋಹನ್ ಸಿಂಗ್ ಅವರು ನಿಧನ ಹೊಂದಿಲ್ಲ. ಅವರ ಕೆಲಸಗಳ ಮೂಲಕ ಎಂದಿಗೂ ನಮ್ಮ ನಡುವೆ ಜೀವಂತವಾಗಿದ್ದಾರೆ. ಜನಸಾಮಾನ್ಯನಿಗೆ ಆಹಾರದ ಹಕ್ಕನ್ನು ಸಂವಿಧಾನಾತ್ಮಕವಾಗಿ ನೀಡಿದವರು. ಆಹಾರ ಭದ್ರತಾ ಕಾಯ್ದೆ, ನರೇಗಾ ಯೋಜನೆ, ಆರ್‌ಟಿಇ, ಆರ್‌ಟಿಐ ಸೇರಿದಂತೆ ಅನೇಕ ಯೋಜನೆಗಳು ವಿಶ್ವಕ್ಕೆ ಮಾದರಿಯಾಗಿವೆ. ದೇಶದ ಬಡವರು ನೀರುದ್ಯೋಗಿಗಳ ಪರವಾಗಿ ಅವರು ಕೆಲಸ ಮಾಡಿದ್ದಾರೆ. ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದ ಮನಮೋಹನ ಸಿಂಗ್ ಅವರ ಅಗಲಿಕೆಯಿಂದ ಇಡೀ ದೇಶಕ್ಕೆ ನಷ್ಟವಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ಬದುಕು ಹಾಗೂ ಅವರು ಮಾಡಿದ ಕೆಲಸಗಳು ನಮಗೆ ಸದಾ ಪ್ರೇರಣೆ, ಆಧಾರ್ ಯೋಜನೆ, ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಶಾ ಕಾರ್ಯಕರ್ತರ ಯೋಜನೆ, ನರೇಗಾ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ರೈತರಿಗೆ ಸಂಕಷ್ಟದ ಹೊತ್ತಿದಲ್ಲಿ ಪರಿಹಾರ ಪ್ಯಾಕೇಜ್ ನೀಡುವ ಮೂಲಕ ಅವರ ಬೆನ್ನಿಗೆ ನಿಂತ ಶಕ್ತಿ ಮನಮೋಹನ್ ಸಿಂಗ್, ಅವರ ಕೊಡುಗೆಗಳನ್ನು ಗೌರವಿಸಲು, ಅವರ ದೂರದೃಷ್ಟಿಯ ನೀತಿಗಳನ್ನು ಅಧ್ಯಯನ ಮಾಡಲು, ಭಾರತದ ಭವಿಷ್ಯವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ನಾವು ಚಿಂತಿಸುತ್ತಿದ್ದೇವೆ ಎಂದರು.

Previous articleಆಸ್ಪತ್ರೆಗೆ ದಾಖಲಾದ ನೀರಜ್ ಡಾಂ: ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
Next articleಸಿಲಿಂಡರ್ ಸ್ಪೋಟ ಪ್ರಕರಣ: ಮಾಲಾಧಾರಿ ಸಾವಿನ ಸಂಖ್ಯೆ ನಾಲ್ಕಕ್ಕೇ