ಬೆಂಗಳೂರು : ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೇ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂಬಂಧಿಸಿದಂತೆ ನಿನ್ನೆ ನಡೆದ ಸಭೆಯಲ್ಲಿ ಮುನ್ನೆಚ್ಚರಿಕಾ ಬಗ್ಗೆ ಚರ್ಚಿಸಲಾಗಿದೆ. ನಾವು ಎಲ್ಲದ್ದಕ್ಕೂ ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು. ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.