ವೈದ್ಯಕೀಯ ವೃತ್ತಿಯನ್ನು ಸೇವೆ ಎಂದು ಪರಿಗಣಿಸಿ

0
22
cm

ಚಿಕ್ಕಬಳ್ಳಾಪುರ: ವೈದ್ಯಕೀಯ ವೃತ್ತಿಯನ್ನು ಸೇವೆ ಎಂದು ಪರಿಗಣಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.  ಅವರು ಇಂದು ನಂದಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ದೇಶದಲ್ಲಿ 130 ಕೋಟಿ ಜನ ಸಂಖ್ಯೆ ಇದೆ. ಜನಸಂಖ್ಯೆಗೆ ತಕ್ಕಷ್ಟು ವೈದ್ಯರಿಲ್ಲ. ದೇಶದಲ್ಲಿ ವೈದ್ಯಕಿಯ ಸೇವೆಗೆ ಸಾಕಷ್ಟು ಅವಕಾಶ ಇದೆ. ಖಾಸಗಿ ಮತ್ತು ಸರ್ಕಾರಿ ಕ್ಷೇತ್ರದಲ್ಲಿ ವೈದ್ಯಕೀಯ ಸೇವೆ ಅಗತ್ಯವಿದೆ. ಈ ಹಿಂದೆ ಗ್ರಾಮೀಣ ಭಾಗದಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಿತ್ತು. ಈಗ ವೈದ್ಯರ ಸಂಖ್ಯೆ ಹೆಚ್ಚಾದಂತೆ ನಕಲಿ ವೈದ್ಯರ ಸಂಖ್ಯೆ ಕಡಿಮೆ ಆಗಿದೆ.  ನಮ್ಮ ಪ್ರಧಾನಿಗಳು  ಆಯುಷ್ಮಾನ್ ಭಾರತ ಯೋಜನೆ ಜಾರಿಗೆ ತಂದ ಮೇಲೆ ಜನರು ಈ ಸೇವೆ ಪಡೆಯುತ್ತಿರುವುದರಿಂದ ನಕಲಿ ವೈದ್ಯರ ಸಂಖ್ಯೆ ಕಡಿಮೆಯಾಗಿದೆ‌ ಎಂದರು. ಕರ್ನಾಟಕದಲ್ಲಿ ಅತಿ ಹೆಚ್ಚು ವೈದ್ಯಕೀಯ ಕಾಲೆಜುಗಳಿವೆ ಹಾಗೂ ಸಂಶೋಧನಾ ಸಂಸ್ಥೆಗಳಿವೆ. ಇಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಅದೃಷ್ಟಶಾಲಿಗಳು ಎಂದರು.

Previous articleಶಾಸಕ ಸ್ಥಾನಕ್ಕೆ ಗುಬ್ಬಿ ಶಾಸಕ ಶ್ರೀನಿವಾಸ್‌ ರಾಜೀನಾಮೆ
Next articleಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತೆ ನಾಪತ್ತೆ!