Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯ

ಶರಣ್ ಪಂಪ್‌ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯ

0

ಮಂಗಳೂರು: ಶರಣ್ ಪಂಪ್‌ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುರತ್ಕಲ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಫಾಜಿಲ್‌ನ ತಂದೆ ಫಾರೂಕ್ ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಫಾರೂಕ್, ತನ್ನ ಮಗನ ಹತ್ಯೆಯ ಹಿಂದಿರುವವರನ್ನು ಪತ್ತೆ ಮಾಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ ಎಂದು ತಿಳಿಸಿದ್ದಾರೆ.
ಶರಣ್ ಪಂಪ್‌ವೆಲ್ ಹೇಳಿಕೆಯಿಂದ ಅನುಮಾನ ಸ್ಪಷ್ಟವಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನನಗೆ ನ್ಯಾಯ ಬೇಕು ಮತ್ತು ಶರಣ್ ವಿರುದ್ಧ ಯುಎಪಿಎ ಮೊಕದ್ದಮೆ ಹೂಡುವಂತೆ ಪೊಲೀಸರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು.
ಈ ಹಿಂದೆ ವಿಎಚ್‌ಪಿಯ ಶೌರ್ಯ ಯಾತ್ರೆ ವೇಳೆ ಮಾತನಾಡಿದ್ದ ಶರಣ್ ಪಂಪ್‌ವೆಲ್, ಅಗತ್ಯ ಬಿದ್ದರೆ ಭಜರಂಗದಳ ಹೋರಾಟ ಮಾಡುತ್ತದೆ, ಕೆಲವೊಮ್ಮೆ ‌ನಾವು ನುಗ್ಗಿ ಹೊಡೆಯುತ್ತೇವೆ. ಪ್ರವೀಣ್ ನೆಟ್ಟಾರು ‌ಹತ್ಯೆಯಾದಾಗ ಹಿಂದೂ ಸಮಾಜ ಕಣ್ಣೀರಲ್ಲಿ ಮುಳುಗಿತ್ತು. ಇಡೀ ಜಿಲ್ಲೆ ಒಬ್ಬ ಉತ್ತಮ ಕಾರ್ಯಕರ್ತನ ಬಲಿದಾನಕ್ಕೆ ಬೇಸರ ಪಟ್ಟಿತ್ತು. ಆಗ ನಮ್ಮ ಕಾರ್ಯಕರ್ತರು ಅವನ ಬಲಿದಾನ ನೋಡಿ ಸುಮ್ಮನೆ ಕೂರಲಿಲ್ಲ. ನಮ್ಮ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳಲು ಸುರತ್ಕಲ್​ಗೆ‌ ಹೋಗಿ ನುಗ್ಗಿ ನುಗ್ಗಿ ಹೊಡೆದರು. ಅದು ನಮ್ಮ ಶೌರ್ಯ. ಸುರತ್ಕಲ್​ನಲ್ಲಿ ಹೊಡೆದ ವಿಡಿಯೋವನ್ನು ನೀವು ಎಲ್ಲರು ನೋಡಲೇಬೇಕು ಎಂದು ಬಹಿರಂಗ ಹೇಳಿಕೆ ನೀಡಿದ್ದರು.

Exit mobile version