ಶಾಸಕರ ಅಮಾನತು‌ ವಾಪಸ್ ಪಡೆಯಬೇಕು

0
50

ಹುಬ್ಬಳ್ಳಿ: ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಶಾಸಕರ ಹಕ್ಕುಗಳನ್ನು ಕಿತ್ತುಕೊಂಡು ಸಂವಿಧಾನ ಬಾಹಿರ ನಡೆ ಅನುಸರಿಸಿದ್ದಾರೆ. ಶಾಸಕರ ಅಮಾನತನ್ನು ಕೂಡಲೇ ವಾಪಸ್ ಪಡೆಯಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಆಗ್ರಹಿಸಿದರು.
ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚೋದನೆಯಿಂದಲೇ ಸ್ಪೀಕರ್ ಅವರು ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸದನದಲ್ಲಿ ಎಲ್ಲರೂ ಶಿಸ್ತು ಕಾಪಾಡಿಕೊಳ್ಳಬೇಕು.‌ ಅಶಿಸ್ತು ಪ್ರದರ್ಶಿಸಿದ್ದರೆ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರ ಸ್ಪೀಕರ್ ಅವರಿಗೆ ಇದೆ. ಆದರೆ, ಅಮಾನತು ಮಾಡಿರುವುದು ಸರಿಯಲ್ಲ. ಸರ್ಕಾರ ಭಂಡತನ ತೋರಿದಾಗ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿದ್ದಾರೆ. ನಿಯಮ ಬಾಹಿರ ಎನಿಸಿದ್ದರೆ ಸ್ಪೀಕರ್ ಅವರು ತಮ್ಮ ಕಚೇರಿಗೆ ಕರೆಯಿಸಿ ಬುದ್ಧಿ ಹೇಳಿ, ಎಚ್ಚರಿಕೆ ನೀಡಬಹುದಿತ್ತು. ಆರು ತಿಂಗಳು ಅಮಾನತು ಮಾಡಿದ್ದು ಅತ್ಯಂತ ಖಂಡನೀಯ. ಇಂತಹ ಘಟನೆ ಈ ಹಿಂದೆ ಎಂದೂ ನಡೆದಿರಲಿಲ್ಲ’ ಎಂದರು

Previous articleವ್ಯಾಟ್ಸಪ್ ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿ ₹ 10 ಲಕ್ಷ ಕಳೆದುಕೊಂಡ…
Next articleಸ್ಥಾನಕ್ಕೆ ಘನತೆ ಗೌರವ ಇಲ್ಲದ ಮೇಲೆ ಇಲ್ಲಿ ಇರಬಾರದು