Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಶಾಸಕರ ಸಮಯ ಪ್ರಜ್ಞೆ ತಪ್ಪಿದ ಧಾರ್ಮಿಕ ಸಂಘರ್ಷ

ಶಾಸಕರ ಸಮಯ ಪ್ರಜ್ಞೆ ತಪ್ಪಿದ ಧಾರ್ಮಿಕ ಸಂಘರ್ಷ

0

ಮಂಗಳೂರು: ನಗರದ ಪಾಂಡೇಶ್ವರದಲ್ಲಿ ಧಾರ್ಮಿಕ ಕೇಂದ್ರಕ್ಕೆ ಮೊಟ್ಟೆ ಎಸೆದ ಘಟನೆಯೊಂದು ವಿಕೋಪಕ್ಕೆ ಹೋಗಿ ಧಾರ್ಮಿಕ ಸಂಘರ್ಷಕ್ಕೆ ಕಾರಣವಾಗುವುದನ್ನು ತಪ್ಪಿಸುವ ಮೂಲಕ ಸ್ಥಳೀಯ ಶಾಸಕರು ಸಮಯಪ್ರಜ್ಞೆ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅ.೯ರಂದು ಸಂಜೆ ನಗರದ ಕದ್ರಿಯಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ ಮತ್ತು ಸಮಾವೇಶ ನಡೆದಿತ್ತು, ಸಂಜೆ ೬.೩೦ರ ಸುಮಾರಿಗೆ ಪಾಂಡೇಶ್ವರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆವರಣಕ್ಕೆ ಯಾರೋ ಕೋಳಿ ಮೊಟ್ಟೆ ಹಾಗೂ ತೆಂಗಿನಕಾಯಿ ಬಿಸಾಡಿದ್ದರು. ಈ ವಿಚಾರನ್ನು ಸ್ಥಳೀಯರು ಶಾಸಕ ವೇದವ್ಯಾಸ್ ಕಾಮತ್ ಗಮನಕ್ಕೆ ತಂದಿದ್ದರು. ಶಾಸಕರು ಕೂಡಲೇ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿ, ಪಾಲಿಕೆ ಸದಸ್ಯ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ ಅವರನ್ನು ಸ್ಥಳಕ್ಕೆ ಕಳುಹಿಸಿ ಯಾವುದೇ ಕಾರಣಕ್ಕೂ ಪರಿಸ್ಥಿತಿ ಕದಡದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದರು.
ಡಿಸಿಪಿ ಸಿದ್ಧಾರ್ಥ ಗೋಯಲ್, ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ, ಅದು ದೇವಸ್ಥಾನದ ಎದುರಿನ ಫ್ಲ್ಯಾಟ್‌ನಿಂದ ಅನ್ಯ ಸಮುದಾಯದ ಇಬ್ಬರು ಪುಟಾಣಿಗಳು ಮಾಡಿದ ಮಕ್ಕಳಾಟ ಎಂಬುದು ಗೊತ್ತಾಗಿತ್ತು. ೧೦ ವರ್ಷದೊಳಗಿನ ಈ ಮಕ್ಕಳು ಫ್ಲ್ಯಾಟ್‌ನ್ನು ಮಹಡಿಯ ಕಿಟಕಿಯಿಂದ ದೇವಸ್ಥಾನದ ಅಂಗಣಕ್ಕೆ ತಮ್ಮ ಕೈಯಲ್ಲಿದ್ದ ಮೊಟ್ಟೆ ಹಾಗೂ ತೆಂಗಿನ ಕಾಯಿ ಎಸೆದಿದ್ದರು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕೂಡಲೇ ಮಕ್ಕಳ ಪೋಷಕರನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಲ್ಲದೆ, ದೇವಸ್ಥಾನದ ಭಾಗಕ್ಕೆ ಹಾಗೂ ದೇವಸ್ಥಾನದ ಹೊರಾಂಗಣಕ್ಕೂ ಪ್ರತ್ಯೇಕ ಸಿಸಿ ಕ್ಯಾಮರಾ ಅಳವಡಿಸುವಂತೆ ದೇವಸ್ಥಾನ ಆಡಳಿತ ಹಾಗೂ ಫ್ಲ್ಯಾಟ್‌ನ ಎಸೋಸಿಯೇಷನ್ ಇಬ್ಬರಿಗೂ ಪೊಲೀಸರು ಸೂಚನೆ ನೀಡಿ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Exit mobile version