Home ತಾಜಾ ಸುದ್ದಿ ಶಾಸಕಾಂಗ ಸಭೆಗೆ ಕೈ ನಾಯಕರ ಆಗಮನ

ಶಾಸಕಾಂಗ ಸಭೆಗೆ ಕೈ ನಾಯಕರ ಆಗಮನ

0

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಎಐಸಿಸಿ ವೀಕ್ಷಕರು ಆಗಮಿಸಿದ್ದಾರೆ. ಬೆಂಗಳೂರಿನ ಶಾಂಗ್ರಿಲಾ ಹೊಟೇಲ್​ನಲ್ಲಿ ಸಭೆ ನಡೆಯಲಿದ್ದು, ದೀಪಕ್ ಬಬಾರಿಯಾ, ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಆಗಮಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದು, ಒಂದೆಡೆ ಸಿದ್ದರಾಮಯ್ಯ ತಮ್ಮ ಬಣದ ಶಾಸಕರ ಜೊತೆಗೆ ಸಭೆ ನಡೆಸಿದ್ದು, ಇನ್ನೊಂದೆಡೆ, ಡಿಕೆ ಶಿವಕುಮಾರ್ ಬೆಂಬಲಿಗರಿಂದಲೂ ಸಭೆ ನಡೆಸಲಾಗುತ್ತಿದೆ. ಇನ್ನೊಂದಡೆ ಡಿಸಿಎಂ ಸ್ಥಾನ ನೀಡಬೇಕೆಂದು ಮುಸ್ಲಿಮರು ಬೇಡಿಕೆ ಇಟ್ಟಿದ್ದಾರೆ. ಜಮೀರ್ ಅಹಮದ್ ಖಾನ್, ಯು.ಟಿ.ಖಾದರ್, ತನ್ವೀರ್​​ ಸೇಠ್ ಡಿಸಿಎಂ ರೇಸ್​ನಲ್ಲಿ ಇದ್ದಾರೆ.

Exit mobile version