Home ತಾಜಾ ಸುದ್ದಿ ಶಾಸಕ ಸತೀಶ್ ಸೈಲ್‌ ಸೇರಿ ಇತರರಿಗೆ ಜಾಮೀನು

ಶಾಸಕ ಸತೀಶ್ ಸೈಲ್‌ ಸೇರಿ ಇತರರಿಗೆ ಜಾಮೀನು

0

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಸೇರಿ ಎಲ್ಲ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಸತೀಶ್ ಸೈಲ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ನೀಡಿದ್ದ 7 ವರ್ಷಗಳ ಕಠಿಣ ಜೈಲುಶಿಕ್ಷೆಯ ಆದೇಶವನ್ನು ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ಧ ಪೀಠ ಅಮಾನತಿನಲ್ಲಿಟ್ಟು ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.

Exit mobile version