Home ತಾಜಾ ಸುದ್ದಿ ಶಿಕಾರಿಪುರ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಶಿಕಾರಿಪುರ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

0

ಶಿಕಾರಿಪುರ: ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿರುವುದನ್ನು ಖಂಡಿಸಿ ಶಿಕಾರಿಪುರ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ತಾಲ್ಲೂಕು ಅಹಿಂದ ಒಕ್ಕೂಟದ ಅಹಿಂದ ಸಂಘಟನೆಯ ಕರೆಗೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸ್ಪಂದಿಸಿದ್ದಾರೆ. ತಾಲ್ಲೂಕು ಅಹಿಂದ ಒಕ್ಕೂಟದ ಯುವ ಘಟಕ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜಕಾರಣದಲ್ಲಿ ಬಿಳಿ ಹಾಳೆಯಂತಿರುವ ಸಿದ್ದರಾಮಯ್ಯನವರಿಗೆ ಕಳಂಕ ಅಂಟಿಸಲು ಕುತಂತ್ರ ನಡೆಸಿದ್ದಾರೆ. ಈ ಉದ್ದೇಶಕ್ಕಾಗಿ ಮುಡಾ ಹಗರಣ ಬಳಸಿಕೊಳ್ಳುತ್ತಿದ್ದಾರೆ ಬಿಜೆಪಿ, ಜೆಡಿಎಸ್ ನಾಯಕರ ಕುತಂತ್ರವನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್‌ ಮಾಡಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು.

Exit mobile version